Русские видео

Сейчас в тренде

Иностранные видео


Скачать с ютуб ಮುತ್ತತ್ತಿ ಆಂಜನೇಯ ದೇವಸ್ಥಾನ | MUTHATHI ANJANEYA SWAMY TEMPLE в хорошем качестве

ಮುತ್ತತ್ತಿ ಆಂಜನೇಯ ದೇವಸ್ಥಾನ | MUTHATHI ANJANEYA SWAMY TEMPLE 2 года назад


Если кнопки скачивания не загрузились НАЖМИТЕ ЗДЕСЬ или обновите страницу
Если возникают проблемы со скачиванием, пожалуйста напишите в поддержку по адресу внизу страницы.
Спасибо за использование сервиса savevideohd.ru



ಮುತ್ತತ್ತಿ ಆಂಜನೇಯ ದೇವಸ್ಥಾನ | MUTHATHI ANJANEYA SWAMY TEMPLE

ಕರ್ನಾಟಕ ರಾಜ್ಯ, ಮಂಡ್ಯ ಜಿಲ್ಲೆ, ಮಳವಳ್ಳಿ ತಾಲ್ಲೂಕು, ಹಲಗೂರು ಹೋಬಳಿಯಲ್ಲಿರುವ ಮುತ್ತತ್ತಿ ಶ್ರೀ ಆಂಜನೇಯಸ್ವಾಮಿ ದೇವಸ್ಥಾನ ಪ್ರಸಿದ್ದ ಯಾತ್ರಾ ಸ್ಥಳ ಹಾಗೂ ಪ್ರವಾಸಿ ತಾಣವಾಗಿದೆ. ಶ್ರೀ ರಾಮ, ಲಕ್ಷ್ಮಣ ಸೀತಾಮಾತೆಯರು ಕಾಡಿಗೆ ವನವಾಸಕ್ಕೆ ಬಂದಾಗ ಕಾವೇರಿ ನದಿ ತೀರದಲ್ಲಿರುವ ತಿರುಗಣೆ ಮಡುವಿನಲ್ಲಿ ಕುಳಿತು ಸ್ನಾನ ಮಾಡುತ್ತಿದ್ದಾಗ ಸೀತಾಮಾತೆಯ ಮೂಗುತಿಯು ಕಾವೇರಿ ನದಿಯಲ್ಲಿ ಬಿದ್ದು ಹೋಗಿರುವುದಾಗಿ ತನ್ನ ಪತಿಯಾದ ಶ್ರೀ ರಾಮರಿಗೆ ಹೇಳಿದಾಗ ಅಲ್ಲೇ ಇದ್ದ ಹನುಮಂತನು ನೀರಿನಲ್ಲಿದ್ದ ಮೂಗುತಿಯನ್ನು ಹುಡುಕಲು ತನ್ನ ಬಾಲವನ್ನು ನೀರಿನಲ್ಲಿ ತಿರುಗಿಸಿ ನೀರಿನಲ್ಲಿ ಮೂಗುತಿ ಕಾಣಿಸಿದಾಗ ಹನುಮಂತನು ಮೂಗುತಿಯನ್ನು ಸೀತಾಮಾತೆಗೆ ನೀಡಿದನು, ಹನುಮನು ಬಾಲವನ್ನು ನೀರಿನಲ್ಲಿ ತಿರುಗಿಸಿದ ರಭಸಕ್ಕೆ ಆ ಜಾಗವು ಇಂದಿಗೂ ತಿರುಗಣೆ ಮಡುವೆಂದು ಪ್ರಸಿದ್ದಿಯಾಗಿದೆ. ಹನುಮಂತನು ಸೀತಾಮಾತೆಗೆ ಮೂಗುತಿಯನ್ನು ನೀಡಿದ್ದಕ್ಕೆ ಮುತ್ತೆತ್ತರಾಯನೆಂದು ಹೆಸರು ಬಂದಿರುತ್ತದೆ. ಈಗ ಆ ಸ್ಥಳವನ್ನು ಮುತ್ತತ್ತಿಯೆಂದು ಕರೆಯುತ್ತಾರೆ. ಶ್ರೀ ಆಂಜನೇಯಸ್ವಾಮಿ ಮೂರ್ತಿಯು ಮುತ್ತತ್ತಿಯಲ್ಲಿ ಭೂಮಿಯಿಂದ ಮೂಡಿದ್ದು ಸದರಿ ಜಾಗದಲ್ಲಿ ಮೂಡಿರುವ ಮೂರ್ತಿಯನ್ನು ಭೂಮಿಯಲ್ಲೇ ಹೂತು ಹನುಮಂತನ ವಿಗ್ರಹವನ್ನು ಕೆತ್ತಿಸಿ ಪ್ರತಿಷ್ಠಾಪನೆ ಮಾಡಿ ಆ ಜಾಗದಲ್ಲಿ ದೇವಸ್ಥಾನವನ್ನು 1986-87ನೇ ಸಾಲಿನಲ್ಲಿ ಸಾರ್ವಜನಿಕ/ ಭಕ್ತಾಧಿಗಳ ವಂತಿಕೆಯಿಂದ ಹಣ ಕ್ರೂಢೀಕರಿಸಿ ದೇವಸ್ಥಾನವನ್ನು ನಿರ್ಮಿಸಲಾಗಿದೆ. ಸದರಿ ಜಾಗದಲ್ಲಿ ನಿರ್ಮಿಸಿರುವ ಹನುಮಂತನು ಸಾರ್ವಜನಿಕ/ಭಕ್ತಾಧಿಗಳಿಗೆ ಅಭಯ ಹಸ್ತವನ್ನು ನೀಡುತ್ತಾ ನೆಲೆಸಿದ್ದರಿಂದ ಆ ಜಾಗವನ್ನು ಮುತ್ತತ್ತಿಯೆಂದು ಕರೆಯುತ್ತಾರೆ. ಈ ಉತ್ತಮ ಸಂಪರ್ಕವಿರುವ ಗುಡ್ಡಗಾಡು ಪ್ರದೇಶವನ್ನು ಮಂಡ್ಯ, ಮದ್ದೂರು, ಚನ್ನಪಟ್ಟಣ, ಬೆಂಗಳೂರಿನಿಂದ ನೇರ ಬಸ್/ಖಾಸಗಿ ವಾಹನಗಳ ಮೂಲಕ ಪ್ರವೇಶಿಸಬಹುದು.

Comments